ಭಾರತದ ಪೂರ್ವ ಮತ್ತು ಪಶ್ಚಿಮ ಘಟ್ಟಗಳಲ್ಲಿ ತಲಾ ಒಂದೊಂದು ಹೊಸ ಜಾತಿಯ ಚಿಮ್ಮಂಡೆ ಕಪ್ಪೆಗಳನ್ನು ಭಾರತೀಯ ವನ್ಯಜೀವಿ ಸಂಸ್ಥೆ, ಭಾರತೀಯ ಪ್ರಾಣಿವಿಜ್ಞಾನ ಸಮೀಕ್ಷೆ ಮತ್ತು ಉತ್ತರ ಒರಿಸ್ಸಾ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದಿದ್ದಾರೆ.
ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.
ಬೆಂಗಳೂರು / Jul 6, 2022