ಭಾರತ - ಜಗತ್ತಿನ ಅತೀ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಗಳಲ್ಲಿ ಅಗ್ರ ರಾಷ್ಟ್ರ. ಜೊತೆಗೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ. ಆದರೆ ದುರದೃಷ್ಟದ ಸಂಗತಿಯೇನು ಗೊತ್ತೆ? ಭಾರತದ ಸುಮಾರು 15% ಜನ ಇಂದಿಗೂ ಕತ್ತಲೆಯಲ್ಲೆ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಕೇವಲ ಸರ್ಕಾರ ಎಂದರೆ ತಪ್ಪಾಗಬಹುದು. ಭಾರತದ ವಿದ್ಯುತ್ ಪೂರೈಕೆಗೆ ಒಂದೆಡೆ ಅರ್ಥಿಕ ಹಾಗೂ ನೈಸರ್ಗಿಕ ಸಂಪನ್ಮೂಲದ ಕೊರತೆ ಇದ್ದರೆ, ಇನ್ನೊಂದೆಡೆ ಪರಿಸರ ರಕ್ಷಣೆಯ ದೊಡ್ಡ ಜವಾಬ್ದಾರಿಯೂ ತಡೆಯಾಗಿ ನಿಂತಿದೆ. ವಿಶ್ವದ ಅನೇಕ ದೇಶಗಳು ಈಗಾಗಲೆ ನವೀಕರಿಸಬಹುದಾದ ಇಂಧನಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳತೊಡಗಿವೆ.
ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.
ಬೆಂಗಳೂರು / Jul 6, 2022