ಶಾಲೆಯಲ್ಲಿ ಕಲಿಯಬೇಕಾದರೆ ಗಣಿತದ ತರಗತಿ ನೆನಪಿದೆಯೇ? ಗಣಿತ ನಮ್ಮಲ್ಲಿ ಬಹುಪಾಲು ಜನರಿಗೆ ಕಬ್ಬಿಣದ ಕಡಲೆಯಾಗಿತ್ತಲ್ಲವೇ? ಅರ್ಧಕ್ಕಿಂತ ಸೂತ್ರಗಳನ್ನು ಸುಮ್ಮನೆ ಬಾಯಿಪಾಠ ಮಾಡಿ ಪರಿಕ್ಷೆಯಲ್ಲಿ ಬರೆಯುತ್ತಿದ್ದುದು ನೆನಪಿದೆಯೇ? ಇಂತಹ ತಲೆನೋವಿನ ಸೂತ್ರಗಳಲ್ಲಿ ಗೋಳದ ಮೇಲ್ಮೈ ವಿಸ್ತೀರ್ಣದ ಸೂತ್ರವೂ ಸಹ ನಾವು ಬಾಯಿಪಾಠ ಮಾಡಿ ಬರೆದ ಸೂತ್ರಗಳಲ್ಲಿ ಒಂದು. ಆ ಅದ್ಭುತವಾದ ಸೂತ್ರಕ್ಕೆ ನಾವು ಹೇಗೆ ಬಂದಿದ್ದೇವೆ ಎಂಬುದರ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲದೆ ನಾವು ಅದನ್ನು ವಿವಿಧ ಸಂದರ್ಭಗಳಲ್ಲಿ ಬಳಸಿದ್ದೇವೆ.
ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.
ಬೆಂಗಳೂರು / Jul 6, 2022