ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Alternate stable states

ಬೆಂಗಳೂರು
25 Apr 2018

ಶುಷ್ಕ ಹುಲ್ಲುಗಾವಲುಗಳು ಮತ್ತು ರಸಭರಿತ ಸಸ್ಯಗಳನ್ನುಳ್ಳ ಮರುಭೂಮಿಗಳು - ಇವೆಲ್ಲಾ ಒಣ ಭೂಪರಿಸರ ವ್ಯವಸ್ಥೆಗಳು ಎನಿಸಿಕೊಳ್ಳುತ್ತವೆ; ಭೂಮಿಯ ಮೇಲ್ಮೈಯ ಸುಮಾರು ೪೦% ಸ್ಥಳವನ್ನು ಇವೇ ಆವರಿಸಿಕೊಂಡಿವೆ. ಸಾಮಾನ್ಯವಾಗಿ ಇವನ್ನು ಜನರು 'ತ್ಯಾಜ್ಯಭೂಮಿಗಳು' ಎಂದು ಕಡೆಗಣಿಸಿದರೂ, ಪರಿಸರ ಸಮತೋಲನದಲ್ಲಿ ಇವು ಕೂಡ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತವೆ; ಈ ಒಣ ಭೂಪರಿಸರ ವ್ಯವಸ್ಥೆಯು ನೀರಿನ ಕೊರತೆಯಿರುವ ಪರಿಸರಕ್ಕೆ ಹೊಂದಿಕೊಳ್ಳುವ ವಿಶಿಷ್ಟ ಸಸ್ಯಗಳು ಮತ್ತು ಪ್ರಾಣಿಗಳಿಗೆ ನೆಲೆಯಾಗಿರುತ್ತವೆ.