ಜೀವವನ್ನು ಉಳಿಸುವ ಔಷಧಗಳನ್ನು ಕಂಡುಹಿಡಿಯುವುದು ಒಂದು ದೀರ್ಘ ಮತ್ತು ಸವಾಲಿನ ಹಾದಿ. ಹೊಸ ಔಷಧವೊಂದನ್ನು ಮಾರುಕಟ್ಟೆಗೆ ತರಲು ಹಲವು ವರ್ಷಗಳ ಸಮಯ ಮತ್ತು ಕೋಟಿಗಟ್ಟಲೆ ಹಣ ಬೇಕಾಗುತ್ತದೆ. ಆದರೂ, ಶೇ. 90ರಷ್ಟು ಔಷಧಗಳು ಯಶಸ್ವಿಯಾಗದೆ ಪ್ರಯೋಗ ಹಂತದಲ್ಲೇ ವಿಫಲಗೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣ, ರೋಗದ ಮೇಲೆ ಪರಿಣಾಮ ಬೀರಬಲ್ಲ ಸೂಕ್ತ ಪ್ರೊಟೀನ್ ಗುರಿಯನ್ನು ಆರಂಭದಲ್ಲೇ ನಿರ್ಧಿಷ್ಟವಾಗಿ ಗುರುತಿಸಲು ವಿಜ್ಞಾನಿಗಳಿಗೆ ಇರುವ ಸವಾಲು. ಇದಕ್ಕೊಂದು ಪರಿಹಾರವಾಗಿ, ಮುಂಬೈನ ಐಐಟಿ ಬಾಂಬೆ ಸಂಸ್ಥೆಯ ವಿಜ್ಞಾನಿಗಳು ‘ಡ್ರಗ್‌ಪ್ರೊಟ್‌ಎಐ’ (DrugProtAI) ಎಂಬ ಕೃತಕ ಬುದ್ಧಿಮತ್ತೆ ಆಧಾರಿತ ನವೀನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ.
ಇ.ವಿ. ವಾಹನಗಳಲ್ಲಿ ಗ್ರಾಫೀನ್ ಬಳಸುವುದರಿಂದ ಬ್ಯಾಟರಿಯ ಚಾರ್ಜಿಂಗ್ ಸಮಯವನ್ನು ಶೇ 22ರಿಂದ 27ರಷ್ಟು ಕಡಿಮೆ ಮಾಡಬಹುದು. ಇದು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆಯನ್ನು ತಗ್ಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಗ್ರಾಫೀನ್ ಬ್ಯಾಟರಿಗಳು ವರದಾನವಾಗಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಗ್ರಾಫೀನ್‌ನ ಉತ್ಪಾದನೆಯೇ ಸದ್ಯದ ದೊಡ್ಡ ಸವಾಲು.
ಬೆಂಗಳೂರು /