ಪಶ್ಚಿಮಘಟ್ಟಗಳ ಕಾಡುಗಳು ಭಾರತದ ಜೀವವೈವಿಧ್ಯದ ಹಾಟ್ಸ್ಪಾಟ್ ಎಂದೇ ಹೆಸರುವಾಸಿ. ಇತ್ತೀಚಿನ ವರ್ಷಗಳಲ್ಲಿ, ಈ ಸಮೃದ್ಧ ಪರಿಸರ ವ್ಯವಸ್ಥೆಗಳಲ್ಲಿ ವಾಸಿಸುವ ಹಲವು ಹೊಸ ಜಾತಿಯ ಉಭಯವಾಸಿಗಳು ಮತ್ತು ಸರೀಸೃಪಗಳು ಪತ್ತೆಯಾಗಿವೆ. ಆದರೆ, ಈ ಬಾರಿ, ಉಭಯಚರಗಳ ಬಗ್ಗೆ ಅಧ್ಯಯನ ನಡೆಸುವ ದೆಹಲಿಯ ವಿಶ್ವವಿದ್ಯಾನಿಲಯದ ಸಂಶೋಧಕರು, ರಸ್ತೆಬದಿಯ ಕೆಸರುಗುಂಡಿಯಂತಹ ಸರಳವಾದ ಸ್ಥಳದಲ್ಲಿ ಅಡಗಿದ್ದ ಹೊಸ ಜಾತಿಯ ಕಪ್ಪೆಯನ್ನು ಕಂಡುಹಿಡಿದಿದ್ದಾರೆ! ಭಾರತ ಸರ್ಕಾರದ ‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ’ಯ ಕ್ರಿಟಿಕಲ್ ಇಕೋಸಿಸ್ಟಮ್ ಪಾರ್ಟ್ನರ್ಶಿಪ್ ಫಂಡ್ನಿಂದ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಅನುದಾನ ಪಡೆದ ತಮ್ಮ ಈ ಸಂಶೋಧನೆಯನ್ನು ‘ಸೈಂಟಿಫಿಕ್ ರಿಪೋರ್ಟ್ಸ್’ ಜರ್ನಲ್ನಲ್ಲಿ ಅವರು ವಿವರಿಸಿದ್ದಾರೆ.
ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.
By Sudhira H S
ಬೆಂಗಳೂರು / Jul 6, 2022