ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Galactic halo

ಬೆಂಗಳೂರು
5 Jul 2018

ಬೆಂಗಳೂರಿನ ರಾಮನ್ ರಿಸರ್ಚ ಇನ್‍ಸ್ಟಿಟ್ಯೂಟ್‍ನ ವಿಜ್ಞಾನಿಗಳು ರಷ್ಯಾ ದೇಶದ, ಮಾಸ್ಕೋದ ಲೆಬೆಡೆವ್ ಫಿಸಿಕಲ್ ಇನ್‍ಸ್ಟಿಟ್ಯೂಟ್‍ನ ವಿಜ್ಞಾನಿಗಳ ಜೊತೆಗೂಡಿ ಈ ರಹಸ್ಯಗಳ ಬುಟ್ಟಿಗೆ ಹೊಸದೊಂದು ವಿಸ್ಮಯಕಾರಿ ದ್ರವ್ಯವನ್ನು ತುಂಬಿದ್ದಾರೆ.