ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

GRACE

ಬೆಂಗಳೂರು
2 Nov 2018

ಒಂದು ಕಾಲದಲ್ಲಿ ಶ್ವೇತವರ್ಣದ ಹಿಮವರ್ಷಗಳಿಂದ ಕಂಗೊಳಿಸುತ್ತಿದ್ದ, ಚಳಿಗಾಲದಲ್ಲಿ ತನ್ನದೆ ಆದ ವೈಶಿಷ್ಟ್ಯತೆಗಳಿಂದ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಶಿಮ್ಲಾದ ಪ್ರಖ್ಯಾತ ಪಟ್ಟಣ ಇಂದು ಇತಿಹಾಸದಲ್ಲೇ ಕಂಡು ಕೇಳರಿಯದ ನೀರಿನ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ೨೦೧೫-೧೬ ಅವಧಿಯಲ್ಲಿ ಆವರಿಸಿದ ಬರಗಾಲವು ಮರಾಠಾವಾಡಾದ ರೈತರ ಜೀವನವನ್ನು ಸಂಪೂರ್ಣವಾಗಿ ದಿಕ್ಕೆಟ್ಟಿಸಿತ್ತು. ಇಂತಹ ಅನೇಕ ಸಂದರ್ಭಗಳು, ಸನ್ನಿವೇಶಗಳು, ಭಾರತದಲ್ಲಿ ನದಿಗಳ ಮಹತ್ವ ಏನೆಂಬುದನ್ನು ತೋರಿಸಿಕೊಟ್ಟಿವೆ. ನದಿಗಳು ನಮ್ಮ ದೇಶದೊಂದಿಗೆ ಕೇವಲ ನೈಸರ್ಗಿಕವಾದ ಸಂಬಂಧವನ್ನು ಹೊಂದಿಲ್ಲ; ನಾಡಿನ ಜನರ ನಾಡಿಮಿಡಿತದೊಂದಿಗೆ ಭಾವನಾತ್ಮಕವಾದ ಸಂಬಂಧವನ್ನೂ ಹೊಂದಿವೆ.