ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Manav

Pune
21 Oct 2020

2019 ರಲ್ಲಿ, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಪುಣೆ (ಐಐಎಸ್ಇಆರ್ ಪುಣೆ), ರಾಷ್ಟ್ರೀಯ ಕೋಶ ವಿಜ್ಞಾನ ಕೇಂದ್ರ, ಪುಣೆ (ಎನ್‌ಸಿಸಿಎಸ್) ಮತ್ತು ಪುಣೆಯ ಪರ್ಸಿಸ್ಟೆಂಟ್ ಸಿಸ್ಟಮ್ಸ್ ಲಿಮಿಟೆಡ್, ಸಂಸ್ಥೆಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯು (ಡಿಬಿಟಿ) ಮಹತ್ವಾಕಾಂಕ್ಷೆಯ ಯೋಜನೆಯೊಂದನ್ನು ಪ್ರಾರಂಭಿಸಿದೆ.  ಮಾನವ್ - ದಿ ಹ್ಯೂಮನ್ ಅಟ್ಲಾಸ್ ಇನಿಶಿಯೇಟಿವ್ ಎಂದು ಕರೆಯಲ್ಪಡುವ ಇದು, ದೇಶದ ಮೊದಲ ಇಂತಹ ಯೋಜನೆಯಾಗಿದೆ.