ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

NTE

ಬೆಂಗಳೂರು
2 Apr 2020

ವರ್ಚಸ್ವಿ ಪ್ರಾಣಿಗಳಲ್ಲಿ ಒಂದಾದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯನ್ನು ಪ್ರಪಂಚದಾದ್ಯಂತ ಪ್ರಾಣಿಸಂರಕ್ಷಣೆಯ ಮುಖವಾಗಿ ಬಳಸಲಾಗುತ್ತಿದೆ. 2019 ರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಂತರ್ರಾಷ್ಟ್ರೀಯ ಹುಲಿ ದಿನವಾದ ಜುಲೈ 29 ರಂದು 2018 ರ ರಾಷ್ಟ್ರೀಯ ಹುಲಿ ಗಣತಿ (ಎನ್‌ಟಿಇ) ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದರು. ಉದ್ದೇಶಿತ ಗಡುವಿಗೆ ನಾಲ್ಕು ವರ್ಷಗಳ ಮೊದಲೇ ಭಾರತವು ತನ್ನ ಹುಲಿ ಜನಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಸಾಧಿಸಿದೆ ಎಂದು ಅವರು ಹೇಳಿದ್ದಾರೆ.