ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Plastic Pollution

ಬೆಂಗಳೂರು
5 Jun 2018

ಈ ವರ್ಷದ ‘ವಿಶ್ವ ಪರಿಸರ ದಿನ’ದ ಅಂಗವಾಗಿ ‘‘ಪ್ಲಾಸ್ಟಿಕ್ಕಿನಿಂದ ಮಾಲಿನ್ಯ ತಡೆಗಟ್ಟೋಣ’’ ಎಂದು ವಿಶ್ವ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಘೋಷಿಸಿದೆ. ಪ್ಲಾಸ್ಟಿಕ್ ಇಂದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದರೂ ಅದರ ಬಗ್ಗೆ ಸರಿಯಾದ ಅರಿವು ಅತ್ಯವಶ್ಯಕ.