ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

satellites

ಬೆಂಗಳೂರು
14 Feb 2020

ಭೂಮಿಯ ಮೇಲೆ ಪರಮಾಣು ಶಸ್ತ್ರಾಸ್ತ್ರಗಳ ದುರ್ಬಳಕೆ ಅತ್ಯಂತ ವಿನಾಶಕಾರಿಯಾಗಿದ್ದು ಅವುಗಳು  ಸ್ಫೋಟಗೊಂಡ ಸ್ಥಳದ ಸುತ್ತಮುತ್ತ 3 ಕಿಲೊಮೀಟರ್ ವ್ಯಾಪ್ತಿಯೊಳಗಿರುವ ಎಲ್ಲವನ್ನೂ ಸುಟ್ಟು ಭಸ್ಮ ಮಾಡುವಂತ ಶಕ್ತಿಯನ್ನು ಹೊಂದಿವೆ. ಈ ಕ್ರಿಯೆಯಲ್ಲಿ ಬಿಡುಗಡೆಯಾಗುವ ಅಯಾನೀಕರಿಸುವ ವಿಕಿರಣಗಳು ನಿರ್ದಿಷ್ಟ  ಪ್ರದೇಶವನ್ನು ಹಾನಿಗೊಳಿಸುವ ಶಕ್ತಿಯನ್ನು ಹೊಂದಿದ್ದು, ದೀರ್ಘಾವಧಿಯಲ್ಲಿ ಆ ಪ್ರದೇಶವು ಬಾಧಿತಗೊಳ್ಳುವಂತೆ ಮಾಡುತ್ತವೆ ಅಲ್ಲದೇ ಆ ಇಡೀ ಪ್ರದೇಶವನ್ನು ವಾಸಕ್ಕೆ ಯೋಗ್ಯವಲ್ಲದಂತೆ ಮಾಡುತ್ತವೆ- ಎರಡನೇ ವಿಶ್ವ ಯುದ್ದದ ಸಂದರ್ಭದಲ್ಲಿ ಹಿರೋಶಿಮಾ ಮತ್ತು ನಾಗಸಾಕಿಯ ಮೇಲೆ ನಡೆದ ದುರಂತ ಬಾಂಬ್ ಸ್ಫೋಟಗಳ ರೀತಿಯಲ್ಲಿಯೇ- ಆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುತ್ತದೆ.