ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Species

ಬೆಂಗಳೂರು
26 Jun 2018

ಮನುಷ್ಯರ ಸಮಾಜದಲ್ಲಿ ಇರುವ ಜಾತಿಭೇದವು ಪ್ರಾಣಿ ಜಗತ್ತಿನಲ್ಲಿ ಇಲ್ಲ ಎಂದರೆ ನಂಬುತ್ತೀರಾ? ಇಲ್ಲಿ ನಾವು ಹೇಳಹೊರಟಿರುವುದು ಪ್ರಭೇದಗಳ ಗಡಿಯ ಆಚೆಗೂ ಗೆಳೆತನ ವಿಸ್ತರಿಸಿಕೊಳ್ಳುವ ಪ್ರಾಣಿಗಳ ಬಗ್ಗೆ. ಜನಪ್ರಿಯ ಅನಿಮೇಟೆಡ್ ಚಿತ್ರ 'ಐಸ್ ಏಜ್'ನಲ್ಲಿ ಪ್ರಾಚೀನ ಶಿಲಾಯುಗದ ಹಿಮಯುಗಕ್ಕೆ ಸಂಬಂಧಿಸಿದ ಕತೆಯಿದೆ; ಈ ಸಿನಿಮಾದ ಪ್ರಮುಖ ಪಾತ್ರಗಳು ಸೋಮಾರಿ ಸಲಗ ಮತ್ತು  ಸಂಶಯಾಸ್ಪದ ನಡತೆಯ ಹುಲಿಯದ್ದು; ಇವು ಪೂರಕ ವಾತಾವರಣವಿಲ್ಲದ ಸ್ಥಿತಿಯಲ್ಲಿ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸಿಕೊಳ್ಳಲು, ತಮ್ಮ ಪ್ರಭೇದಗಳ ವ್ಯತ್ಯಾಸಗಳನ್ನು ಮರೆತು, ಒಗ್ಗೂಡಿ, ತಮ್ಮ ಜೀವನಪ್ರಯಾಣದಲ್ಲಿ ಪರಸ್ಪರ ಸಹಾಯ ಮಾಡಿಕೊಳ್ಳುತ್ತವೆ. ವಿಭಿನ್ನ ಜಾತಿಗಳಿಗೆ ಸೇರಿದ ಪ್ರಾಣಿಗಳ ನಡುವಿನ ಸ್ನೇಹದ ಅತ್ಯುತ್ತಮ ಉದಾಹರಣೆಯಿದು.